ಕೇವಲ ಅಂಬಾನಿ- ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಜನರಿಗೆ ಏನೂ ಲಾಭವಿಲ್ಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು ಆ 25: ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದ ವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ ಎಂದರು. ಈ ಕಾರಣಕ್ಕೆ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದು ಕೊಳ್ಳುತ್ತಿದೆ ಎಂದು ವಿವರಿಸಿದರು. ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವ ರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದು ಸಭಿಕರನ್ನು ಪ್ರಶ್ನಿಸಿದರು.

ಮಾಜಿ ಸಚಿವ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳ ಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

1 thought on “ಕೇವಲ ಅಂಬಾನಿ- ಅದಾನಿ ಜೇಬಿನಲ್ಲಿ ಹಣ ಇದ್ದರೆ ದೇಶಕ್ಕೆ ಜನರಿಗೆ ಏನೂ ಲಾಭವಿಲ್ಲ-ಸಿಎಂ ಸಿದ್ದರಾಮಯ್ಯ

  1. They may investing money in industry to get more employment opportunities to youths & get growth of the nation. That is better than give money to political Investment through politicians further growth in corruption & loose every things.

Leave a Reply

Your email address will not be published. Required fields are marked *

error: Content is protected !!