ಚಂದ್ರನ ಮೇಲೆ ಲ್ಯಾಂಡರ್ ಇಳಿದ ಸ್ಥಳ ‘ಶಿವಶಕ್ತಿ’- ಆ​.23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಪ್ರಧಾನಿ ಘೋಷಣೆ

ಬೆಂಗಳೂರು: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಅಲ್ಲದೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್​ ಎಂದು ಹೆಸರಿಟ್ಟರು. ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.

ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು. ಆ. 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು.

ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!