ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.