ಗಂಗೊಳ್ಳಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ- ಐವರ ಬಂಧನ

ಕುಂದಾಪುರ, ಸೆ.12: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಸೆ.12ರಂದು ಮೋವಾಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ಗಂಗೊಳ್ಳಿ ಠಾಣೆ ಪಿಎಸ್ಸೈ ಹರೀಶ್ ಆರ್. ಹಾಗೂ ಸಿಬ್ಬಂದಿ ತಂಡ ಈ ದಾಳಿ ನಡೆಸಿದೆ.

ಕಾರ್ಯಾಚರಣೆಯಲ್ಲಿ ನಾಲ್ವರು ಉತ್ತರ ಪ್ರದೇಶದ ಕಾರ್ಮಿಕರು ಹಾಗೂ ಓರ್ವ ಸ್ಥಳೀಯ ಅಕ್ರಮ ದಕ್ಕೆ ನಡೆಸುತ್ತಿದ್ದ ಅಲ್ಟನ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!