ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ನಿಧನ

ಮಂಗಳೂರು: ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಇಂದು ನಡೆದಿದೆ.

ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಮೃತರು.

ಇಂದು ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

1993 ನೇ ಬ್ಯಾಚ್ ನವರಾಗಿರುವ ರಾಜೇಶ್ ಅವರು ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!