ಉಡುಪಿ: ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಉಡುಪಿ: ಆರಂಭದಲ್ಲಿ ಉಡುಪಿಯಲ್ಲಿ ಮಹಿಳಾ ಕಾಂಗ್ರೆಸ್ ಗೆ ಆರಂಭಿಕ ಬುನಾದಿಯನ್ನು ಹಾಕಿ ಸಂಘಟನೆಯನ್ನು ಮುನ್ನಡೆಸುವಲ್ಲಿ ಬಹಳಷ್ಟು ಶ್ರಮಿಸಿರುವ ಹಿರಿಯ ನಾಯಕಿ ಸರಳಾ ಕಾಂಚನ್ ಅವರು ಮಹಿಳಾ ಕಾಂಗ್ರೆಸ್‌ನ ಧ್ವಜವನ್ನು ಅನಾವರಣ ಗೊಳಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಸರ್ವರಿಗೂ ಉಜ್ವಲ ಭಾರತದ ಪ್ರತಿಜ್ಞಾವಿಧಿ ಬೋಧಿಸಿದರು.ಸಭೆಯಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು 40ವರ್ಷಗಳ ಹಿಂದೆ ಮಹಿಳಾ ಕಾಂಗ್ರೆಸ್ ಸಂಸ್ಥಾಪನೆ ಆಗಿದ್ದಾದರೂ ಸ್ವಾತಂತ್ರ್ಯ ಪೂರ್ವದಿಂದಲೂ ಮಹಿಳೆಯರು ಸಂಘಟನೆಗೊಂಡು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡಿದ್ದರು. ಮಹಿಳಾ ಕಾಂಗ್ರೆಸ್ ಇಲ್ಲದೇ ಪಕ್ಷದ ಸಂಘಟನೆ ಕಷ್ಟಸಾಧ್ಯ.ನನ್ನ ಬೂತ್ ನನ್ನ ಜವಾಬ್ದಾರಿ ಎನ್ನುವ ಧ್ಯೇಯವನ್ನು ತಮ್ಮದಾಗಿಸಿಕೊಂಡು ತಮಗೆ ಸೇರಿರುವ ಬೂತ್ ನಲ್ಲಿ ಎಲ್ಲರೂ ಕಾರ್ಯತತ್ಪರರಾದಲ್ಲಿ ನಮ್ಮ ಪಕ್ಷಕ್ಕೆ ಮುಂಬರುವ ದಿನಗಳಲ್ಲಿ ಗೆಲುವು ಶತಸಿದ್ಧ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಅವರು ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಕೆಪಿಸಿಸಿಯ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ,ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಂದ್ರಿಕಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಮಾಧವ ಬನ್ನಂಜೆ,, ನಾಗೇಶ್ ಕುಮಾರ್ ಉದ್ಯಾವರ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳು, ಸದಸ್ಯರು, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಹಿರಿಯ ನಾಯಕಿ ಸರಳಾ ಕಾಂಚನ್ ಅವರು 80ನೇ ವರ್ಷದ ಹುಟ್ಟು ಹಬ್ಬವನ್ನು ಮಹಿಳಾ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!