ಉಡುಪಿ: ನಗರದಲ್ಲಿ ಬೆಳ್ಳಂಬೆಳಗ್ಗೆ ಮಹಿಳೆಯರ ಸರಣಿ ಸರಗಳ್ಳತನ

ಉಡುಪಿ, ಸೆ.18: ನಗರದಲ್ಲಿ ಬೆಳ್ಳಂಬೆಳಗ್ಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಮಹಿಳೆಯರ ಚಿನ್ನದ ಸರ ಕಸಿದುಕೊಂಡು ಪರಾರಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ನಗರದ ರಾಜಾರಾಮ್ ಮೋಹನ್ ರಾಯ್ ರಸ್ತೆಯ ನಿವಾಸಿ ಎಪ್ಪತ್ತು ವರ್ಷದ ಗೀತಾ ಅವರು ಮುಂಜಾನೆ 5.30ಕ್ಕೆ ಶ್ರೀ ಕೃಷ್ಣ ಮಠಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವೃದ್ದೆಯ ಮೂವರು ಪವನ್ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದರು.

ಇದೇ ದುಷ್ಕರ್ಮಿಗಳಿಬ್ಬರು ಕರಾವಳಿ ಬೈಪಾಸ್ ಬಳಿಯಿಂದ ತನ್ನ ತಾಯಿ ಮನೆಗೆ ಕದಿರು ಕಟ್ಟುವುದಕ್ಕೆ ತೆರಳುತ್ತಿದ್ದ ಕುತ್ಪಾಡಿ ನಿವಾಸಿ ಮಮತ (38) ಅವರ ಕುತ್ತಿಗೆಯಲ್ಲಿದ್ದ ಮೂರು ಲಕ್ಷ ಮೌಲ್ಯದ ಕರಿಮಣಿ ಸರ ಕಸಿದು ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳರ ಪತ್ತೆಗೆ ಸಿಸಿಟಿವಿ ಮೊರೆ ಹೋದ ಪೊಲೀಸರು.

ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಗಳು ಸುಮಾರು 35ವರ್ಷದ ಆಸುಪಾಸಿನವರು ಎಂದು ಮಹಿಳೆಯರು ತಿಳಿಸಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಕರಾವಳಿ ಬೈಪಾಸ್ ‌ಬಳಿ ಪೊಲೀಸ್ ಇಲಾಖೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಆರೋಪಿಗಳ ಚಹರೆ ದಾಖಲಾಗಿದ್ದು, ಅದರ ಜಾಡು‌ಹಿಡಿದು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.

ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.

ಆರೋಪಿಗಳ ಪತ್ತಗೆ ಇನ್ಸ್ಪೆಕ್ಟರ್ ಮತ್ತು ಎಸ್ಐ ನೇತೃತ್ವದಲ್ಲಿ ಎರಡು ತಂಡ ರಚನೆಎಸ್ಪಿ ಡಾ.ಕೆ ಅರುಣ್

ಇಂದು ನಡೆದ ಸರಣಿ ಸರಗಳ್ಳತನ ಕೃತ್ಯದ ಆರೋಪಿಗಳ ಪತ್ತೆಗೆ ಇನ್ಸ್‌ಪೆಕ್ಟರ್ ಹಾಗೂ ಎಸ್ಐ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು, ಕರಾವಳಿ ಬೈಪಾಸ್ ಬಳಿಯ ಸಿಸಿ ಕ್ಯಾಮರಾದಲ್ಲಿ ದುಷ್ಕರ್ಮಿಗಳ ಚಹರೆ ಕತ್ತಲೆ ಇದ್ದುದ್ದರಿಂದ ಅಷ್ಟೂ ಸ್ಪಷ್ಟವಾಗಿ ಕಾಣುತ್ತಿಲ್ಲ. ಆದರೂ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದೆಂದು ಎಸ್ಪಿ ಡಾ.ಕೆ.ಅರುಣ್ “ಉಡುಪಿ ಟೈಮ್ಸ್‌” ಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!