ಕೋಟ್ಯಾಂತರ ರೂ. ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಸ್ವಾಮೀಜಿ 10 ದಿನ ಸಿಸಿಬಿ ಕಸ್ಟಡಿಗೆ
ಬೆಂಗಳೂರು: ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ MLA ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು 10 ದಿನಗಳ ಕಾಲ (ಸೆ.29) ಸಿಸಿಬಿ ವಶಕ್ಕೆ ಒಪ್ಪಿಸಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್ ನಲ್ಲಿ ಮಂಗಳವಾರ ಬಂಧಿಸಿದ್ದರು. ಆರೋಪಿಯನ್ನು ಕಸ್ಟಡಿಗೆ ನೀಡುವಂತೆ ಸಿಸಿಬಿ ಅಧಿಕಾರಿಗಳು ಕೋರ್ಟ್ ಗೆ ಮನವಿ ಮಾಡಿದ್ದರು.