ಉಡುಪಿ: ಜಿಲ್ಲೆಯ ಜನತಾ ದರ್ಶನಕ್ಕೆ ಇನ್ನೂ ಬಾರದ ಜಿಲ್ಲಾ ಉಸ್ತುವಾರಿ ಸಚಿವರು
ಉಡುಪಿ: ಜಿಲ್ಲೆಯ ಸಾರ್ವಜನಿಕ ಸಮಸ್ಯೆ ಆಲಿಸಿ ಅವುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ. ಆರ್. ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ನಿಗದಿಯಾಗಿತ್ತು. ಆದರೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ಸಂಪೂರ್ಣ ಭರ್ತಿಯಾದರೂ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ಆಗಮಿಸಲಿಲ್ಲ ಇದರಿಂದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಇತಿಹಾದಲ್ಲೇ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಕೈಗೊಂಡಿರುವ ‘ಜನತಾ ದರ್ಶನ’ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಬೇಕಾಗಿತ್ತು. ನಿಗದಿಯಂತೆ 10.30ಕ್ಕೆ ಪ್ರಾರಂಭಿಸಬೇಕಾದ ಸಭೆ 11.50 ಆದರೂ ಸಭೆ ಪ್ರಾರಂಭಿಸಲಿಲ್ಲ. ಸಮಸ್ಯೆಯ ಅಹವಾಲಿನೊಂದಿಗೆ ಬಂದಿರುವ ಜನರು ಸಚಿವರನ್ನು ಕಾದೂ ಕಾದು ಸುಸ್ತು ಆಗಿದ್ದಾರೆ.