ವಿಶ್ವ ಬಂಟರ ಸಮ್ಮೇಳನ: ಕ್ರೀಡೋತ್ಸವ, ಸಾಂಸ್ಕೃತಿಕ ವೈಭವದ ಕರಪತ್ರ ಬಿಡುಗಡೆ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯುವ ವಿಶ್ವ ಬಂಟರ ಸಮ್ಮೇಳನವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.

ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ವಿಶ್ವ ಬಂಟರ ಸಮ್ಮೇಳನದಲ್ಲಿ ನಡೆಯುವ ವಿಶ್ವ ಬಂಟರ ಕ್ರೀಡೋತ್ಸವ ಮತ್ತು ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ವಿಶ್ವದಲ್ಲಿರುವ ಬಂಟರನ್ನು ಒಂದೇ ಚಪ್ಪರದಡಿಯಲ್ಲಿ ಸೇರಿಸುವ ಪ್ರಯತ್ನದಲ್ಲಿ ವಿಶ್ವ ಬಂಟರ ಸಮ್ಮಿಲನ ನಡೆಯಲಿದೆ. ಸಮ್ಮೇಳನದಲ್ಲಿ ಸ್ವಾಮೀಜಿಗಳು, ರಾಜಕೀಯ ನೇತಾರರು, ಸಿನಿಮಾ ತಾರೆಯರು, ಧಾರ್ಮಿಕ ಮುಖಂಡರು, ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ವೇದಿಕೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ, ಎಕ್ಕಾರ್ ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಎಸ್ ಪೂಂಜ, ಬಿ ಶೇಖರ ಶೆಟ್ಟಿ, ಡಾ ಆಶಾಜ್ಯೋತಿ ರೈ, ಅರುಣಾ ಎಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!