ಕನ್ನಡ ಹಿರಿಯ ನಟ ಬ್ಯಾಂಕ್ ಜನಾರ್ದನ್‌ಗೆ ಹೃದಯಾಘಾತ

ಬೆಂಗಳೂರು: ಕನ್ನಡ ಸಿನೆಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಕಳೆದ ರಾತ್ರಿ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಜನಾರ್ದನ್ ಅವರಿ​ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಅವರಿಗೆ ಹೃದಯಾಘಾತ ಸಂಭವಿದ್ದು. ಸದ್ಯ​ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಎಂದು ತಿಳದು ಬಂದಿದೆ.

ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್​ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!