ಉಡುಪಿ: ಪ್ರತ್ಯೇಕ ಪ್ರಕರಣ- ಇಬ್ಬರು ನೇಣಿಗೆ ಶರಣು

ಉಡುಪಿ, ಸೆ.26: ವೈಯಕ್ತಿಕ ಕಾರಣದಿಂದ ಮನನೊಂದ 76-ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ 4ನೇ ಅಡ್ಡರಸ್ತೆಯ ನಿವಾಸಿ ಸುಧಾ ಸಿ.ಅವರ ಪುತ್ರ ಪ್ರಶಾಂತ(23) ಎಂಬವರು ಸೆ.26ರಂದು ಬೆಳಗ್ಗೆ ಮನೆಯ ಹೊರಗಿನ ಜಗುಲಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣ ಮಣಿಪಾಲದ ಶಿವಳ್ಳಿ ಗ್ರಾಮ್ ನಿವಾಸಿ ನಾರಾಯಣ(56) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.25ರಂದು ಮಧ್ಯಾಹ್ನ ಮನೆಯ ತಾರಸಿಯ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್: 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!