ಉಡುಪಿ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಮುಷ್ಕರ- ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ತೆರವು
ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಾಗ್ರಿ ಸಾಗಾಟ ಲಾರಿ ಮತ್ತು ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರ ಸೋಮವಾರವೂ ಮುಂದುವರೆದಿದ್ದು, ಅ.3ರಂದು ರಾಜ್ಯಪಾಲರು ಜಿಲ್ಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮನವಿ ಮೇರೆಗೆ ರಸ್ತೆ ಬದಿಗಳಲ್ಲಿ ನಿಲ್ಲಿಸಲಾದ ಟೆಂಪೋ ಹಾಗೂ ಲಾರಿಗಳನ್ನು ಇಂದು ಸಂಜೆ ತೆರವುಗೊಳಿಸಲಾಯಿತು.
ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ನಿಲ್ಲಿಸ ಲಾಗಿದ್ದ ನೂರಾರು ಲಾರಿ ಹಾಗೂ ಟೆಂಪೋಗಳನ್ನು ತೆರವುಗೊಳಿಸಿ, ಕಟಪಾಡಿ ಸಮೀಪದ ಮೈದಾನದಲ್ಲಿ ನಿಲ್ಲಿಸಲಾಗಿದೆ. ಅದೇ ರೀತಿ ಜಿಲ್ಲೆಯಾದ್ಯಂತ ರಸ್ತೆ ಬದಿ ನಿಲ್ಲಿಸಲಾಗಿದ್ದ ವಾಹನಗಳನ್ನು ತೆರವುಗೊಳಿಸಿ ಅಲ್ಲೇ ಸಮೀಪದ ಮೈದಾನದಲ್ಲಿ ನಿಲ್ಲಿಸಲಾಗಿದೆ. ಸಮಸ್ಯೆ ಬಗೆಹರಿಯು ವವರೆಗೆ ನಮ್ಮ ಮುಷ್ಕರ ಮುಂದುವರೆಯಲಿದೆ ಎಂದು ಒಕ್ಕೂಟದ ಪ್ರಮುಖ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.