ಪಳ್ಳಿ: ಪರಿಶಿಷ್ಟ ಜಾತಿಯ ಅಪ್ರಾಪ್ತೆಯ ಅತ್ಯಾಚಾರಕ್ಕೆ ಯತ್ನ – ತಲೆಮಾರೆಸಿಕೊಂಡ ಆರೋಪಿಗಳು
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ಸೆಪ್ಟೆಂಬರ್ 28 ರಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತೆಯ ಮೇಲೆ ನಿಂಜೂರು ಗ್ರಾಮದ ಬೋಪಾಡಿ ಸಮೀಪ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ದೂರು ನೀಡಲಾಗಿದೆ.
ಪ್ರಕರಣದಲ್ಲಿ ನಿಂಜೂರಿನ ಸುಜಿತ್ ಪೂಜಾರಿ ಮತ್ತು ಅಭಿನಂದನ್ ಶೆಟ್ಟಿ ಆರೋಪಿಗಳಾಗಿದ್ದಾರೆ. ಆರೋಪಿಗಳ ವಿರುದ್ಧ ಕಲಂ 354 (D ) 506 ,R/W, 34 IPC, ಮತ್ತು ಕಲಂ 3 (2 ) (ವಿ-ಎ) SC-ST (POA) ಆಕ್ಟ್ 2015 ಮತ್ತು 11,12 ,17 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿಗಳು ತಲೆಮೆರೆಸಿಕೊಂಡಿದ್ದು ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.