ಮಣಿಪಾಲ: ಮನೆಯಲ್ಲಿ ಅನೈತಿಕ ಚಟುವಟಿಕೆ- ಪೊಲೀಸ್ ದಾಳಿ ಇಬ್ಬರ ಬಂಧನ

ಮಣಿಪಾಲ: ಹೆರ್ಗಾ ಗ್ರಾಮದ ಮನೆಯಲ್ಲಿ ಅನೈತಿಕ  ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ನಿನ್ನೆ ರಾತ್ರಿ ಮಣಿಪಾಲ ಇನ್ಸ್‌ಪೆಕ್ಟರ್ ದೇವರಾಜ್ ಟಿ.ವಿ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಸರಳಬೆಟ್ಟಿನ ಹೆರ್ಗಾ ಗ್ರಾಮದ ಸರಳಬೆಟ್ಟಿ ಮನೆಯಲ್ಲಿ ಯುವತಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿರು ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ವಶದಲ್ಲಿದ್ದ 2 ಮೊಬೈಲ್‌ ಪೋನ್‌ಗಳು, ನಗದು 15000 ರೂ, ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಹಣಗಳಿಸುವ ಉದ್ದೇಶದಿಂದ ಹುಡುಗಿಯರನ್ನು ಪುಸಲಾಯಿಸಿ ಕರೆ ತಂದು ಅವರಿಗೆ ಬಲವಂತಾಗಿ ಪುರುಷರನ್ನು ಒದಗಿಸಿ ಅನೈತಿಕ ಚಟುವಟಿಕೆ ನಡೆಸುತ್ತಿರುವ ಆರೋಪಿಗಳಾದ ಶಿವರಾಜ(38) ಮಂಡ್ಯ ಮತ್ತು ನಿಂಗಪ್ಪ ಅಂಬಿಗೇರಾ(29) ಬಾಗಲಕೋಟೆ ಎಂಬವರನ್ನು ವಶಕ್ಕೆ ಪಡೆದು ಇನ್ನೊರ್ವ ಆಪಾದಿತ ನವೀನ್‌ಗೌಡ ಎಂಬಾತ ತಲೆಮರಿಸಿಕೊಂಡಿರುತ್ತಾನೆ. ಈ ಬಗ್ಗೆ ಮಣಿಪಾಲ ಪೊಲೀಸ್‌ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!