ಪಕ್ಷ ವಿರೋಧಿ ಚಟುವಟಿಕೆ- ಗ್ರಾಮ ಪಂಚಾಯತ್ ಸದಸ್ಯರನ್ನು ಉಚ್ಛಾಟಿಸಿದ ಬಿಜೆಪಿ
ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದು ಕೊಂಡು ಪಕ್ಷದ ನಿಲುವನ್ನು ವಿರೋಧಿಸಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರ ಸೋಲಿಗೆ ಕಾರಣರಾಗಿರುವ ಮಾಲತಿ ಮತ್ತು ಅವರಿಗೆ ಬೆಂಬಲಿಸಿರುವ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಸುವರ್ಣ ಹಾಗೂ ಫ್ರೀಡಾ ಡಿ’ಸೋಜಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಕಾಪು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್‌ರವರ ಸೂಚನೆಯಂತೆ 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.