ಉಡುಪಿಯಲ್ಲಿ ಮರಳು, ಕೆಂಪುಕಲ್ಲು ಸಮಸ್ಯೆ: ನಾಳೆ (ಅ.5) ಸಿಎಂ ಸಭೆ
ಉಡುಪಿ, ಅ.4: ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಮರಳು, ಕೆಂಪು ಕಲ್ಲು ಹಾಗೂ ಇನ್ನಿತರೇ ಸಮಸ್ಯೆಗಳ ಬಗ್ಗೆ ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳಕರ್ ತಿಳಿಸಿದ್ದಾರೆ.
ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿ ಕೊಠಡಿ ಸಂಖ್ಯೆ-313ರಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಉಡುಪಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಲಿರುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.