ವಿಶ್ವಕಪ್ 2023: ಕೊಹ್ಲಿ, ರಾಹುಲ್ ಭರ್ಜರಿ ಬ್ಯಾಟಿಂಗ್- ಆಸೀಸ್ ವಿರುದ್ಧ ಭಾರತಕ್ಕೆ 6 ವಿಕೆಟ್ ಜಯ

ಚೆನ್ನೈ: ಚೆಪಾಕ್ ಸ್ಟೇಡಿಯಂನಲ್ಲಿ ಇಂದು ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್‌ನ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 6 ವಿಕೆಟ್‌ಗಳ ಜಯದೊಂದಿಗೆ ಮೊದಲ ಪಂದ್ಯಾದಲ್ಲೇ ಅಂಕಪಟ್ಟಿ ಅಗ್ರಸ್ಥಾನಕ್ಕೆ ಏರಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ 49.1 ಓವರ್ ಗಳಲ್ಲಿ 199 ರನ್ ರನ್ ಗಳಿಸಿ ಆಲೌಟ್ ಆಯಿತು. ಬೌಲಿಂಗ್ ಪಿಚ್ ನಲ್ಲಿ ಭಾರತ ತಂಡದ ಸ್ಪಿನ್ನರ್ ಗಳು ಪ್ರಾಬಲ್ಯ ಮೆರೆದು ಆಸ್ಟ್ರೇಲಿಯಾ ಟೀಮ್‌ಗೆ ರನ್ ಗಳಿಕೆಯಾಗದಂತೆ ಕಟ್ಟಿಹಾಕಿದರು.

ಆಸ್ಟೇಲಿಯಾ ನೀಡಿದ್ದ 200 ರನ್ ಗುರಿ ಬೆನ್ನತ್ತಿದ ಭಾರತ ಮೊದಲ ಓವರ್ ಗೆ ಇಶಾನ್ ಕಿಶನ್ ವಿಕೆಟ್ ಒಪ್ಪಿಸಿತು. 2 ನೇ ಓವರ್ ನಲ್ಲಿ ನಾಯಕ ರೋಹಿತ್ ಶರ್ಮಾ, ಶ್ಯೇಯಸ್ ಅಯ್ಯರ್ ಕೂಡ ಸೊನ್ನೆ ಸುತ್ತಿ ನಿರ್ಗಮಿಸಿದರು. ನಂತರ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ತಂಡವನ್ನು ಗೆಲುವಿನ ಹಾದಿಗೆ ಕೊಂಡೊಯ್ದರು.

ಈ ಜೋಡಿ 167 ರನ್ ಗಳ ಜೊತೆಯಾಟ ನೀಡಿದ್ದರು. ವಿರಾಟ್ ಕೊಹ್ಲಿ 85 ರನ್ ಗಳಿಸಿ ಔಟಾದರೆ ಕೆಎಲ್ ರಾಹುಲ್ ಅಜೇಯ 97 ರನ್ ಬಾರಿಸಿ ತಂಡಕ್ಕೆ ಗೆಲುವಿಗೆ ಆಸರೆಯಾದರು. ಇನ್ನು ಹಾರ್ದಿಕ್ ಪಾಂಡ್ಯ ಅಜೇಯ 11 ರನ್ ಬಾರಿಸಿದ್ದಾರೆ. ಭಾರತ 41.2 ಓವರ್ ನಲ್ಲಿ 201 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿದೆ.

ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಇದರ ನಂತರ ಬುಮ್ರಾ ಭಾರತಕ್ಕೆ ಮೊದಲ ಯಶಸ್ಸನ್ನು ನೀಡಿದರು. ಬುಮ್ರಾ ಮಿಚೆಲ್ ಮಾರ್ಷ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಇಲ್ಲಿಂದ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಆ ಸ್ಥಾನ ವಹಿಸಿಕೊಂಡರು. ಇವರಿಬ್ಬರು ಅರ್ಧಶತಕದ ಜೊತೆಯಾಟವಾಡಿದರು.

ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ವಾರ್ನರ್ 41 ರನ್‌ ಗಳಿಸಿದ್ದಾಗ ಕುಲದೀಪ್ ಯಾದವ್‌ಗೆ ಬಲಿಯಾದರು. ಅವರ ನಂತರ, ಸ್ಟೀವ್ ಸ್ಮಿತ್ ಅವರನ್ನು ಜಡೇಜಾ 46 ರನ್‌ಗಳಿಗೆ ಔಟ್ ಮಾಡಿದರು. ಆನಂತರ, ಲಬುಸ್ಚಾಗ್ನೆ 27 ರನ್‌ ಗಳಿಸಿದ್ದಾಗ ರವೀಂದ್ರ ಜಡೇಜಾ ಅವರ ಎಸೆತದಲ್ಲಿ ಹೊರನಡೆದರು. ಅಲೆಕ್ಸ್ ಕ್ಯಾರಿಯನ್ನೂ ಜಡೇಜಾ ಖಾತೆ ತೆರೆಯದೆ ವಾಪಸ್ ಕಳುಹಿಸಿದರು.

ಕುಲದೀಪ್ ಯಾದವ್ ಮತ್ತೊಮ್ಮೆ ತಮ್ಮ ಕೆಲಸವನ್ನು ಮಾಡಿದರು. 15 ರನ್ ಗಳಿಸಿದ್ದ ಮ್ಯಾಕ್ಸ್ ವೆಲ್ ರನ್ನು ಔಟ್ ಮಾಡಿದರು. ಇದಾದ ನಂತರ ಅಶ್ವಿನ್ 8 ರನ್ ಬಾರಿಸಿದ್ದ ಕ್ಯಾಮರಾನ್ ಗ್ರೀನ್ ಅವರನ್ನು ಔಟ್ ಮಾಡಿದರು.  ಒಟ್ಟಾರೆ ಆಸ್ಟ್ರೇಲಿಯಾ 49.3 ಓವರ್ ನಲ್ಲಿ 199ಕ್ಕೆ ಆಲೌಟ್ ಆಯಿತು. ಭಾರತದ ಪರ ಜಡೇಜಾ ಗರಿಷ್ಠ 3 ವಿಕೆಟ್ ಪಡೆದರು. ಕುಲದೀಪ್ 2 ವಿಕೆಟ್ ಪಡೆದರು.

Leave a Reply

Your email address will not be published. Required fields are marked *

error: Content is protected !!