ಪಂಚ ರಾಜ್ಯಗಳ ಚುನಾವಣೆ: ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು.

ಮಧ್ಯ ಪ್ರದೇಶದಲ್ಲಿ ನವೆಂಬರ್ 17

ರಾಜಸ್ತಾನದಲ್ಲಿ ನವೆಂಬರ್ 23

ಮಿಜೋರಾಂ ನಲ್ಲಿ ನವೆಂಬರ್ 7

ತೆಲಂಗಾಣದಲ್ಲಿ ನವೆಂಬರ್ 30

ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನಂವೆಂಬರ್ 7 ರಂದು ಮೊದಲ ಹಂತ ಮತ್ತು ನವೆಂಬರ್ 17 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ಮತ ಎಣಿಕೆಯು ಡಿ.3 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!