ಉಡುಪಿ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಗರದಲ್ಲಿ ಮಾಸ್ಕ್ ಧರಿಸದವರಿಗೆ ದಂಡ

ಉಡುಪಿ: (ಉಡುಪಿ ಟೈಮ್ಸ್ ವರದಿ) ನಗರದಲ್ಲಿ ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆಯಾಗಿ ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದವರಿಗೆ ದಂಡ ವಿಧಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಉಡುಪಿ ನಗರಸಭೆಯ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಸಹಕಾರದೊಂದಿಗೆ ಬುಧವಾರ ಕೋರ್ಟ್ ರಸ್ತೆಯಲ್ಲಿ ಬಸ್, ಕಾರು, ದ್ವಿಚಕ್ರ ವಾಹನಗಳಲ್ಲಿ ಮತ್ತು ವ್ಯಾಪಾರ ಮಳಿಗೆಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ಇದ್ದ ಜನರಲ್ಲಿ ದಂಡ ವಸೂಲು ಮಾಡಲಾಯಿತು.

ಒಂದುವರೆ ತಾಸು ಕಾರ್ಯಚರಣೆಯಲ್ಲಿ ನೂರಕ್ಕೂ ಹೆಚ್ಚೂ ಜನರಲ್ಲಿ ದಂಡ ವಸೂಲು ಮಾಡಲಾಗಿದೆಂದು ಪೌರಾಯುಕ್ತರಾದ ಆನಂದ್ ಕಲ್ಲೋಲಿಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!