ಕೋವಿಡ್-19: ಮುಂಬೈ ಅ.31ರ ವರೆಗೆ ಲಾಕ್‌ಡೌನ್ ವಿಸ್ತರಣೆ
ಮುಂಬೈ: ಕೋವಿಡ್ ಹರಡುವಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಕ್ಟೋಬರ್ 31ರ ವರೆಗೆ ಲಾಕ್‌ಡೌನ್ ಅನ್ನು ವಿಸ್ತರಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.
ಅಕ್ಟೋಬರ್ 5 ರಿಂದ ಹೋಟೆಲ್, ಫುಡ್ ಕೋರ್ಟ್, ರೆಸ್ಟೋರೆಂಟ್ ಮತ್ತು ಬಾರ್‌ಗಳು ಶೇ 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ದೇಶದಲ್ಲಿ ಮಹಾರಾಷ್ಟ್ರವು ಕೊರೊನಾ ಸೋಂಕಿನ ಕೇಂದ್ರಬಿಂದುವಾಗಿ ಪರಿಣಮಿಸಿದೆ. ಮಹಾರಾಷ್ಟ್ರದಲ್ಲಿ ಈ ವರೆಗೆ ಒಟ್ಟು 2,60,789 ಪ್ರಕರಣಗಳು ದಾಖಲಾಗಿದ್ದು, 36,181 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.