ಅನ್ ಲಾಕ್ – 5: ಥಿಯೇಟರ್ ತೆರೆಯಲು ಅಸ್ತು, ಶಾಲೆ ತೆರೆಯುವ ನಿರ್ಧಾರ ರಾಜ್ಯಕ್ಕೆ
ಹೊಸದಿಲ್ಲಿ: ಕೋವಿಡ್ 19 ಸಂಬಂಧಿತ ಅನ್ ಲಾಕ್ ಪ್ರಕ್ರಿಯೆಯನ್ನು ಇನ್ನಷ್ಟು ಸಡಿಲಗೊಳಿಸಿರುವ ಕೇಂದ್ರ ಗೃಹ ಸಚಿವಾಲಯವು ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ ಗಳ ಭಾಗಶಃ ಕಾರ್ಯನಿರ್ವಹಣೆಗೆ ಅನುಮತಿ ನೀಡಿದೆ.
ಈ ಅನ್ ಲಾಕ್ 5 ಅಕ್ಟೋಬರ್ 15ರಿಂದ ಜಾರಿಗೊಳ್ಳಲಿದೆ. ಶಾಲೆ ಮತ್ತು ಕೋಚಿಂಗ್ ಸೆಂಟರ್ ಗಳನ್ನೂ ಸಹ ಅಕ್ಟೋಬರ್ 15ರ ನಂತರ ತೆರೆಯಲು ಕೇಂದ್ರ ಅನುಮತಿ ನೀಡಿದೆ. ಆದರೆ ಈ ಕುರಿತಾದ ನಿರ್ಧಾರವನ್ನು ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡಲಾಗಿದೆ.
ಮಾರ್ಗಸೂಚಿಗಳ ಪ್ರಕಾರ, ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗುವುದು, ಇದಕ್ಕಾಗಿ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಹೊರಡಿಸುತ್ತದೆ