ಕಳೆದ ಆರು ವರ್ಷಗಳಲ್ಲಿ ಭಾರತದ ನಿರುದ್ಯೋಗ ದರ ಅತ್ಯಂತ ಕಡಿಮೆ: ಪ್ರಧಾನಿ ಮೋದಿ

ನವದೆಹಲಿ: ಭಾರತದ ವಿಸ್ತಾರಗೊಳ್ಳುತ್ತಿರುವ ಆರ್ಥಿಕತೆಯು ಯುವಜನರಿಗೆ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಎಂದು ಒತ್ತಿಹೇಳಿರುವ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ನಿರುದ್ಯೋಗ ದರ ಕಳೆದ ಆರು ವರ್ಷಗಳಲ್ಲಿ ಅತ್ಯಂತ ಕಡಿಮೆ ಇದೆ ಎಂದು ಗುರುವಾರ ಹೇಳಿದ್ದಾರೆ.

ಕೌಶಲ್ ದೀಕ್ಷಾಂತ್ ಸಮಾರೋಹ್ ಅವರಿಗೆ ನೀಡಿದ ವಿಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ ಅವರು ಭಾರತದಲ್ಲಿ ಉದ್ಯೋಗ ಸೃಷ್ಟಿಯು ಹೊಸ ಎತ್ತರವನ್ನು ತಲುಪಿದೆ ಎಂದಿದ್ದಾರೆ. ಅಭಿವೃದ್ಧಿಯ ಪ್ರಯೋಜನಗಳು ಗ್ರಾಮ ಮತ್ತು ನಗರ ಎರಡಕ್ಕೂ ಸಮಾನವಾಗಿ ತಲುಪುತ್ತಿವೆ ಮತ್ತು ಇದರ ಪರಿಣಾಮವಾಗಿ ಹೊಸ ಅವಕಾಶಗಳು ಹಳ್ಳಿ ಮತ್ತು ನಗರಗಳಲ್ಲಿ ಸಮಾನವಾಗಿ ಹೆಚ್ಚುತ್ತಿವೆ ಎಂದು ಪ್ರಧಾನಿ ಹೇಳಿದ್ದಾರೆ.

ಭಾರತದಲ್ಲಿ ಉದ್ಯೋಗ ಸೃಷ್ಟಿಯು ಹೊಸ ದಾಖಲೆ ಬರೆದಿದೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ ಭಾರತದಲ್ಲಿ ನಿರುದ್ಯೋಗ ದರ ಕಳೆದ ಆರು ವರ್ಷಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ” ಎಂದು ಮೋದಿ ತಿಳಿಸಿದ್ದಾರೆ.

ಹಿಂದಿನ ಸರ್ಕಾರಗಳಲ್ಲಿ ಕೌಶಲ್ಯ ಅಭಿವೃದ್ಧಿಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿತ್ತು. ಆದರೆ ನಮ್ಮ ಸರ್ಕಾರ ಕೌಶಲ್ಯದ ಮಹತ್ವವನ್ನು ಅರ್ಥಮಾಡಿಕೊಂಡಿದೆ ಮತ್ತು ಅದಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ರಚಿಸಿದೆ ಮತ್ತು ಪ್ರತ್ಯೇಕ ಬಜೆಟ್ ಅನ್ನು ನಿಗದಿಪಡಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!