ಉಡುಪಿ: ಎಲ್‌ಐಸಿಯ ನಿವೃತ್ತ ಅಭಿವೃದ್ಧಿ ಅಧಿಕಾರಿ ಕುಂಞಮೋನು ನಿಧನ
ಉಡುಪಿ: ಆದಿಉಡುಪಿ ಮಾರ್ಕೆಟ್ ಯಾರ್ಡ್ ಬಳಿಯ ನಿವಾಸಿ, ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ ಕುಂಞಮೋನು(76) ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಇವರು ಸ್ನೇಹ ಜೀವಿಯಾಗಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.