68 ಸಾಧಕರಿಗೆ 2023-24ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಬೆಂಗಳೂರು: ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಸಮಾಜ ಸೇವಕರು ಸೇರಿದಂತೆ 68 ಸಾಧಕರಿಗೆ 2023-24ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ.

ಕನ್ನಡ ನಾಡಿನ ಪರವಾಗಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರಕಾರ ಗುರುತಿಸಿದೆ.

ಪತ್ರಕರ್ತರಾದ ದಿನೇಶ್ , ಚಾರ್ಮಾಡಿ ಹಸನಬ್ಬ, ಹಾಜಿ ಅಬ್ದುಲ್ಲ ಪರ್ಕಳ, ಕೆ. ಷರೀಫಾ, ಹುಸೇನಾಬಿ ಬುಡೇನ್ ಸಾಬ್ ಸಿದ್ದಿ, ಸೇರಿದಂತೆ ಹಲವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅದೇ ರೀತಿ 10 ಸಂಘ- ಸಂಸ್ಥೆಗಳ ಪೈಕಿ ದ.ಕ ಜಿಲ್ಲಾ ಮುಸ್ಲಿಮ್‌ ಶಿಕ್ಷಣ ಸಂಸ್ಥೆಗಳ ಒಕ್ಕೂಟ ʼಮೀಫ್‌ʼ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.

ʼ2023ನೇ ಸಾಲಿನಲ್ಲಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯ ಆಯ್ಕೆಯಲ್ಲಿ ಎಲ್ಲ ಜಿಲ್ಲೆಗಳಿಗೆ ಪ್ರಾತಿನಿದ್ಯ ನೀಡಲಾಗಿದೆ. ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆʼ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ʼ100 ವರ್ಷ ದಾಟಿದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಒಬ್ಬರು ದಾವಣಗೆರೆ ಹಾಗೂ ಒಬ್ಬರು ಉತ್ತರ ಕನ್ನಡ ಜಿಲ್ಲೆಯವರು. 13 ಮಹಿಳೆಯರು ಮತ್ತು 54 ಪುರುಷರು ಹಾಗೂ ಮತ್ತು ಒಬ್ಬರು ಮಂಗಳ ಮುಖಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾದವರಿಗೆ ರೂ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕ ವಿತರಿಸಲಾಗುವುದುʼ ಎಂದು ಸಚಿವ ತಂಗಡಗಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!