ಉಡುಪಿ: ರಾಜ್ಯಮಟ್ಟದ ಕ್ರೀಡಾಕೂಟ- ದ.ಕ. ಜಿಲ್ಲೆ ಚಾಂಪಿಯನ್
ಉಡುಪಿ: ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಸೈಂಟ್ ಸಿಸಿಲಿ ಪ್ರೌಢಶಾಲೆ ಆಶ್ರಯದಲ್ಲಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ಜರಗಿದ 14ರ ವಯೋಮಾನದ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆ ಸಮಗ್ರ ಪ್ರಶಸ್ತಿ ಜಯಿಸಿತು. ದ.ಕ. ಜಿಲ್ಲೆಯ ಕ್ರೀಡಾಪಟುಗಳು 4 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕ ಜಯಿಸಿದರು.
ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ತೋಟದಮನೆ ಶ್ರೀ ಶಿರಡಿ ಸಾಯಿಬಾಬ ಮಂದಿರದ ಮೊಕ್ತೇಸರ ದಿವಾಕರ್ ಶೆಟ್ಟಿ, ಕನ್ನರ್ಪಾಡಿ ಶ್ರೀ ಜಯದುರ್ಗಾ ದೇವಸ್ಥಾನದ ಅಧ್ಯಕ್ಷ ರಾಘವೇಂದ್ರ ಭಟ್, ಗಣ್ಯರಾದ ಪುರುಷೋತ್ತಮ್ ಶೆಟ್ಟಿ, ಮುನಿಯಾಲು ಉದಯಕುಮಾರ್ ಶೆಟ್ಟಿ, ಜಯಪ್ರಕಾಶ್ ಕೆದ್ಲಾಯ, ಸುಧೀರ್‌ಕುಮಾರ್ ಶೆಟ್ಟಿ, ಅನಿಲ್ ಲೋಬೊ, ರಮೇಶ್ ಕಾಂಚನ್ ವಿಜೇತರಿಗೆ ಬಹುಮಾನ ವಿತರಿಸಿದರು.
ಡಿಡಿಪಿಐ ಗಣಪತಿ ಕೆ. ಅಧ್ಯಕ್ಷತೆ ವಹಿಸಿದ್ದರು. ಸೈಂಟ್ ಸಿಸಿಲಿ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ತೆರೇಸಾ ಜ್ಯೋತಿ, ಸೈಂಟ್ ಸಿಸಿಲಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಪ್ರೀತಿ ಜೆ.ಕ್ರಾಸ್ತಾ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ, ತಾಲೂಕು ಅಧ್ಯಕ್ಷ ಚಂದ್ರಶೇಖರ್ ಸುವರ್ಣ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ನಗರಸಭೆ ಪೌರಾಯುಕ್ತ ರಾಯಪ್ಪ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ನಿರೂಪಿಸಿ, ದೈ.ಶಿ. ಶಿಕ್ಷಕ ಎಡ್ವಿನ್ ಮಂಡೋನ್ಸಾ ವಂದಿಸಿದರು.