ಮನೆಗೆ ನುಗ್ಗಿ ಗಣಿ ಮತ್ತು ಭೂ-ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯ ಭೀಕರ ಹತ್ಯೆ

ಬೆಂಗಳೂರು: ಗಣಿ ಮತ್ತು ಭೂ-ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಒಬ್ಬರನ್ನು ಭೀಕರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರೋ ಘಟನೆ ಇಂದು ನಡೆದಿದೆ.

ಗಣಿ-ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೊಲೆಗೀಡಾಗಿರುವ ಅಧಿಕಾರಿ ಎಂದು ಗುರುತಿಸಲಾಗಿದೆ.

ಪ್ರತಿಮಾ ಅವರು ಇಲ್ಲಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದರೆನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಂತ ಸಂದರ್ಭದಲ್ಲಿ ನುಗ್ಗಿರುವಂತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿರೋದಾಗಿ ತಿಳಿದು ಬಂದಿದೆ.

ಪತಿಯಿಂದ ದೂರವಾಗಿದ್ದ ಪ್ರತಿಮಾ ಒಬ್ಬಂಟಿಯಾಗಿ ದೊಡ್ಡಕಲ್ಲಸಂದ್ರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿರುವ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!