ಉಡುಪಿ: ಕಾಂಗ್ರೆಸ್ ಮುಖಂಡ, ಮಾಹಿತಿ ಹಕ್ಕುಗಳ ಕಾರ್ಯಕರ್ತ ಯಜ್ಞೇಶ್ ಆಚಾರ್ಯ ನಿಧನ
ಉಡುಪಿ: ಕೊಡವೂರು ನಿವಾಸಿ, ಕಾಂಗ್ರೆಸ್ ಮುಖಂಡ, ಮಾಹಿತಿ ಹಕ್ಕುಗಳ ಕಾರ್ಯಕರ್ತ ಯಜ್ಞೇಶ್ ಆಚಾರ್ಯ(53) ಅಲ್ಪಕಾಲದ ಅಸೌಖ್ಯದಿಂದ ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಪ್ರಚಾರ ಬಯಸದೆ ತನ್ನ ಕಾರ್ಯಗಳನ್ನು ನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದ ಇವರು ಸದಾ ಪಕ್ಷದ ಪರವಾಗಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಿದ್ದರು. ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಹುದ್ದೆಯನ್ನು ಅಲಂಕರಿಸಿದ್ದರು.
ಒಳಕಾಡು ಸರಕಾರಿ ಶಾಲೆಯ ಅಭಿವೃದ್ಧಿ ಸಮಿತಿಯಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಸ್ಥಳೀಯವಾಗಿ ಹೆಸರುಗಳಿಸಿದ್ದರು ಯಜ್ಞೇಶ್ ಆಚಾರ್ಯರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.