ಮಣಿಪಾಲ: ಎಂಟನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೈದ ವಿದ್ಯಾರ್ಥಿನಿ

ಮಣಿಪಾಲ: ಇಲ್ಲಿನ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ತನ್ನ ಪ್ಲಾಟ್‌ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.

ಹೆರ್ಗಾ ಗ್ರಾಮದ ಕೃತಿಕಾ ಎಂಬವರ ಮಗಳು ಪ್ರಜ್ಞಾ (13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪ್ರಜ್ಞಾ ಹೆರ್ಗಾ ಗ್ರಾಮದ ಸರಳೇಬೆಟ್ಟು ಹೈಪಾಯಿಂಟ್‌ ಹೈಟ್ಸ್‌ ಟೆರೇಸ್‌ನಿಂದ ನ.5 ರಂದು ಬೆಳಿಗ್ಗೆ 6.20ಕ್ಕೆ ಎಂಟನೇ ಮಹಡಿಯಿಂದ ಹಾರಿದ್ದಳು. ತಕ್ಷಣ ಮನೆಯವರು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ  ದಾಖಲಿಸಿದ್ದರು.

ಗಂಭೀರ ಗಾಯಗೊಂಡ ಪ್ರಜ್ಞಾ ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಸಂಜೆ 7:45 ಗಂಟೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಮಣಿಪಾಲ ಪೊಲೀಸರು ತಿಳಿಸಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!