ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೋನಾ ಪಾಸಿಟಿವ್
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಅವರು, ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನನ್ನ ಆತ್ಮೀಯರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೂ ಆಗಿರುವ ಸುರೇಶ್ ಕುಮಾರ್ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ, ಸಂಪೂರ್ಣ ಚೇತರಿಸಿಕೊಂಡು ತಮ್ಮ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.