ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ: ಬಿಜೆಪಿ ಭರ್ಜರಿ ಗೆಲುವಿಗೆ ನಾಂದಿ- ಕೆ.ಉದಯ ಕುಮಾರ್ ಶೆಟ್ಟಿ
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಯನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಸ್ವಾಗತಿಸಿದ್ದಾರೆ.
ಬಿ.ವೈ. ವಿಜಯೇಂದ್ರರವರ ಆಯ್ಕೆ ಪಕ್ಷದ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಯುವ ನಾಯಕರಾಗಿ, ನೀಡಿದ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ದಾಖಲಿಸಿದ ಹಿರಿಮೆ ಬಿ.ವೈ. ರಾಘವೇಂದ್ರ ಅವರಿಗಿದೆ. ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವನ್ನು ದಾಖಲಿಸಲಿದೆ. ಬಿ.ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಳನ್ನು ಸಲ್ಲಿಸುತ್ತೇನೆ ಎಂದು ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.