ಉಡುಪಿ: ಬುಲೆಟ್ ಡಿಕ್ಕಿ – ಪಾದಚಾರಿ ಮೃತ್ಯು

ಉಡುಪಿ: ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.10ರಂದು ಸಂಜೆ ವೇಳೆ ನಗರದ ಗುಂಡಿಬೈಲು ಪಾಡಿಗಾರ ಎಂಬಲ್ಲಿ ನಡೆದಿದೆ.

ಮೃತರನ್ನು ಗೋವಿಂದ (50) ಎಂದು ಗುರುತಿಸಲಾಗಿದೆ. ಮನೆಗೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದ ಗೋವಿಂದ ಅವರಿಗೆ ಕಲ್ಸಂಕ ಕಡೆಯಿಂದ ಗುಂಡಿಬೈಲ್ ಕಡೆಗೆ ಹೋಗುತ್ತಿದ್ದ ಬುಲೆಟ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗೋವಿಂದ ಜಿಲ್ಲಾಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಪಘಾತದಿಂದ ಬುಲೆಟ್ ಸವಾರ ದರ್ಶಿತ್ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!