ಪ್ರೊ.ಎಂ.ಎಲ್ ಸಾಮಗರಿಗೆ ಚಿಟ್ಟಾಣಿ ಪ್ರಶಸ್ತಿ ಪ್ರದಾನ
ಉಡುಪಿ: ಪರ್ಯಾಯ ಕೃಷ್ಣಾಪುರ ಮಠದ ಆಶ್ರಯದಲ್ಲಿ ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ, ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇವರ ಸಹಯೋಗದೊಂದಿಗೆ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಶನಿವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಜರಗಿತು.
ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾ ಸಾಗರ ತೀರ್ಥ ಸ್ವಾಮೀಜಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಹವ್ಯಾಸಿ ಕಲಾವಿದ ಪ್ರೊ.ಎಂ.ಎಲ್.ಸಾಮಗ ಮತ್ತು ಟಿ.ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದೆ ಬಿ.ಕೆ. ಸುಮತಿ ರಾವ್ ಅವರಿಗೆ ಪ್ರದಾನ ಮಾಡಿದರು.
ಬಳಿಕ ಮಾತನಾಡಿದ ಕೃಷ್ಣಾಪುರ ಸ್ವಾಮೀಜಿ, ಯಕ್ಷಗಾನದಲ್ಲಿ ತಮ್ಮದೇ ಛಾಪನ್ನು ಮೂಡಿಸಿ ಇತರರನ್ನು ಪ್ರೋತ್ಸಾಹಿಸಿ ಚಿಟ್ಟಾಣಿಯವರ ಹೆಸರಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಅಭಿಮಾನಿಗಳು ಮತ್ತು ಪ್ರೇಕ್ಷಕರಿಗೂ ಭಗವಂತನ ಅನುಗ್ರಹವಾಗಲಿ ಎಂದು ಹಾರೈಸಿದರು.
ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ಡಾ.ಟಿ.ಎಸ್.ರಾವ್, ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಬಳಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್, ಸುಬ್ರಹ್ಮಣ್ಯ ಚಿಟ್ಟಾಣಿ ಉಪಸ್ಥಿತರಿದ್ದರು.