ಉಡುಪಿ: ರಾಜ್ಯೋತ್ಸವ ಪುರಸ್ಕೃತರಿಗೆ ಜಮಾ ಅತೆ ಇಸ್ಲಾಮಿ ಹಿಂದ್ ಅಭಿನಂದನೆ
ಮಣಿಪಾಲ: ರಾಜ್ಯೋತ್ಸವ ಪುರಸ್ಕೃತರಿಗೆ ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ವತಿಯಿಂದ ಮಣಿಪಾಲದ ಮಸೀದಿಯಲ್ಲಿ ಅಭಿನಂದನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ವಿಜೇಯ ಹಾಜಿ ಅಬ್ದುಲ್ಲಾ ಪರ್ಕಳ ಹಾಗೂ ಆಯಿಶಾ ಕಾರ್ಕಳರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಕಾಂಚನ್, ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಮುಹಮ್ಮದ್ ಕುಂಞ ಮಾತನಾಡಿದರು.
ಇದ್ರಿಸ್ ಹೂಡೆ ಪ್ರಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಸರ್ಫರಾಜ್ ಮನ್ನಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.