ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು, ನ.13: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ. ಮಹಿಳಾ ಹಾಸ್ಟೆಲ್‌‌ನ 6ನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೀವನದಲ್ಲಿ ಹತಾಶೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ ನೋಟ್‌ ನಲ್ಲಿ ಉಲ್ಲೇಖಿಸಿದ್ದಾಳೆ.

ತನ್ನ ದೇಹ ದಪ್ಪಗಾಗಿದ್ದೇನೆ ಎಂದು ಮಾನಸಿಕ ಖಿನ್ನತೆ ಗೊಳಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!