ಉಡುಪಿ: ಪ್ರತ್ಯೇಕ ಪ್ರಕರಣ ಜಿಲ್ಲೆಯಲ್ಲಿ ಮೂವರ ಆತ್ಮಹತ್ಯೆ
ಬ್ರಹ್ಮಾವರ, ನ.13: ವೈಯಕ್ತಿಕ ಕಾರಣದಿಂದ ಮನನೊಂದ ಕೆಂಜೂರು ಗ್ರಾಮದ ಮಹಾಬಲ ನಾಯ್ಕ (46) ಎಂಬವರು ನ.12ರಂದು ಮಧ್ಯಾಹ್ನ 3.45 ಗಂಟೆಗೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರದ ಬೀಜಾಡಿ ಗ್ರಾಮದ ನಿವಾಸಿ ವಿಜಯ್ (44) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.12ರಂದು ಮಧ್ಯಾಹ್ನ ವೇಳೆ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳದಲ್ಲಿ ಮದ್ಯ ಸೇವಿಸುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಿಟ್ಟೆ ಗ್ರಾಮದ ಅತ್ತೂರು ನಾರ್ತ್ ಚೇತನಾ ಹಳ್ಳಿ ನಿವಾಸಿ ಚಂದ್ರಕಾಂತ(30) ಎಂಬವರು ನ.12ರಂದು ರಾತ್ರಿ ವೇಳೆ ಮನೆಯ ಸಮೀಪ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.