ನೇಜಾರು ಹತ್ಯೆ ಪ್ರಕರಣ -ಸರಕಾರ ಗಂಭೀರವಾಗಿ ಪರಿಗಣಿಸಿ, ಕುಟುಂಬಕ್ಕೆ ನ್ಯಾಯ ಒದಗಿಸಬೇಕು- ರಮೀಜ್ ಹುಸೇನ್
ಉಡುಪಿ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನ್ವಾಲರ ಕಗ್ಗೊಲೆ ಘಟನೆ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ತಾಯಿ ಮಕ್ಕಳನ್ನು ಹತ್ಯೆಗೈದ ದುಷ್ಕರ್ಮಿಯನ್ನು ಅದಷ್ಟು ಬೇಗ ಬಂಧಿಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು.
ದೇಶ ಜನ ದೀಪಾವಳಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಬೆಳ್ಳಂಬೆಳಿಗ್ಗೆ ಒಂದೇ ಮನೆಯ ತಾಯಿ ಹಾಗು ಮೂರು ಮಕ್ಕಳನ್ನು ಕೊಂದು ಹಾಕಿದ್ದು ದುಖಕರವಾಗಿದೆ. ಈ ಘಟನೆಯಿಂದ ಜಿಲ್ಲೆಯ ಜನತೆ ದುಖಿಸುವಂತೆ ಮಾಡಿದೆ. ಮನುಷ್ಯನ ಜೀವಕ್ಕೆ ಬೆಲೆ ಇಲ್ಲದ ರೀತಿಯಾಗಿದ್ದು ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಖೇದ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದು ಎರಡು ದಿನ ಕಳೆದರೂ ಆರೋಪಿ ಪತ್ತೆಯಾಗದಿರುವುದರಿಂದ ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕೊಲೆಗಾರನನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯ ಒದಗಿಸಬೇಕು. ಮುಂದೆ ಈ ರೀತಿಯ ಘಟನೆಯ ನಡೆಯದಂತೆ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು ಎಂದು ಸರಕಾರಕ್ಕೆ ಮನವಿ ಸಲ್ಲಿಸುತೇನೆಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಪ್ರತಿಕಾ ಹೇಳಿಕೆ ನೀಡಿದ್ದಾರೆ.