ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭ ಇಲ್ಲ: ಡಾ.ಕೆ.ಸುಧಾಕರ್
ಮಡಿಕೇರಿ: ಶಾಲೆಗಳನ್ನು ಪ್ರಾಂಭಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯವು ಮಾರ್ಗಸೂಚಿ ಪ್ರಕಟಿಸಿದ್ದರೂ ರಾಜ್ಯದಲ್ಲಿ ಕೋವಿಡ್–19 ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವ ಚಿಂತನೆ ಸರ್ಕಾರದ ಮುಂದೆ ಇಲ್ಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಲ್ಲಿ ಹೇಳಿದರು.
ಕೊರೊನಾದ ಮಧ್ಯಂತರ ಅವಧಿಯಲ್ಲಿ ರಾಜ್ಯವಿದೆ. ಎರಡು ತಿಂಗಳಿಂದ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಶಾಲೆ ಆರಂಭಿಸುವ ಕುರಿತು ತಜ್ಞರ ಸಲಹೆ ಪಡೆಯಲಾಗಿದ್ದು, ಶಾಲೆ ಆರಂಭಿಸುವುದಕ್ಕೆ ಇದು ಸೂಕ್ತ ಸಮಯವಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ, ಇನ್ನೂ ಮೂರು ವಾರಗಳ ಕಾಲ ಪರಿಸ್ಥಿತಿ ಅವಲೋಕಿಸಲಾಗುವುದು. ಪಕ್ಕದ ರಾಜ್ಯಗಳ ಪರಿಸ್ಥಿತಿ ಗಮನಿಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ದಸರಾ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸಿಗರು ಬರುತ್ತಾರೆ. ಎಲ್ಲ ಪ್ರವಾಸಿಗರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಬೇಕು. ಪ್ರವಾಸಿ ತಾಣಗಳಲ್ಲಿ ಪೊಲೀಸ್, ಕಂದಾಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಿ ಆರೋಗ್ಯ ತಪಾಸಣೆ ಸಹಿತ ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಮಾರ್ಗಸೂಚಿ ಸಿದ್ಧಪಡಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ” ಎಂದು ಸಚಿವರು ತಿಳಿಸಿದರು.
ಶಾಲೆಗಳನ್ನು ಪುನರಾರಂಭಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯವು ಮಾರ್ಗಸೂಚಿ ಪ್ರಕಟಿಸಿದ್ದರೂ ರಾಜ್ಯದಲ್ಲಿ ಕೋವಿಡ್–19 ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವ ಚಿಂತನೆ ರಾಜ್ಯ ಸರ್ಕಾರದ ಮುಂದೆ ಇಲ್ಲ’ ಎಂದು ಸುಧಾಕರ್ ಹೇಳಿದರು