ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಏರ್‌ಪೋರ್ಟ್ ಭದ್ರತಾ‌ ಸಿಬ್ಬಂದಿ ಬಂಧನ?

ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಬೆಳಗಾವಿ ಪೊಲೀಸರ ‌ಸಹಕಾರದಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್​​​​ ಅರುಣ್​​​ ಚೌಗಲೆ(35)  ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ​​ ಏರ್​ಪೋರ್ಟ್​ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್‌‌ಪಿಎಫ್‌ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಏಕಮುಖ ಪ್ರೀತಿ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎಂದು ತಿಳಿದುಬಂದಿದೆ.

ವಾರದ ಹಿಂದೆ ನೇಜಾರಿನ ಮನೆಗೆ ಬರ್ತ್ಡೆ ಪಾರ್ಟಿಗೆ ಬಂದಿದ್ದ ಪ್ರವೀಣ್ ಅರುಣ್ ಅಫ್ನಾನ್‌ಗೆ ಉಂಗುರು ತೋಡಿಸಿದ್ದ ಎನ್ನಲಾಗಿದೆ. ಬಳಿಕ ಪ್ರವೀಣ್‌ನನ್ನು ಅಫ್ನಾನ್ ತರಾಟೆಗೆ ತೆಗೆದುಕೊಂಡಿದ್ದಳು ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಕುಪಿತಗೊಂಡಿದ್ದ ಪ್ರವೀಣ್ ಆಕೆಯನ್ನು ಹತ್ಯೆಗೈಯುವ ಸಂಚು ರೂಪಿಸಿದ್ದ ಎನ್ನುವುದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆ ಕೃತ್ಯಕ್ಕೆ ಸುಪಾರಿ ನೀಡಿದ ಆರೋಪಿಗಳ ಪತ್ತೆಗೆ ಕೇರಳದ ಕೊಟ್ಟಾಯಂ ಕಡೆಗೆ ಡಿವೈಎಸ್‌ಪಿ ದಿನಕರ್ ಪಿ.ನೇತೃತ್ವದ ತಂಡ ಹೋಗಿದ್ದು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದೆ. ಅಫ್ನಾನ್ ತನ್ನ ಕೊಟ್ಟಾಯಂನ ಸ್ನೇಹಿತನ ಜೊತೆ ಅತೀಯಾಗಿ ಫೋನ್ ‌ನಲ್ಲಿ ಮಾತನಾಡಿದ್ದು ಆತನ ಪತ್ತೆಗೂ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!