ನೇಜಾರು: ಕೊಲೆ ಆರೋಪಿಯ ಮಹಜರು – ಉದ್ರಿಕ್ತರಿಂದ ರಸ್ತೆ ತಡೆ, ಲಘು ಲಾಠಿ ಪ್ರಹಾರ
ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಮಹಜರು ಮಾಡಲು ನೇಜಾರು ಕೊಲೆ ನಡೆದ ಸ್ಥಳಕ್ಕೆ ಕರೆ ತರಲಾಗಿತ್ತು. ಮಹಜರು ಬಳಿಕ ಆರೋಪಿಯನ್ನು ಹಿಂದಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಉದ್ರಿಕ್ತ ಗುಂಪು ಪೊಲೀಸ್ ವಾಹನದತ್ತ ನುಗ್ಗಿ ಆರೋಪಿಗೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ.
ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಆಕ್ರೋಶಿತ ಗುಂಪನ್ನು ಚದುರಿಸಿದರು.
ಈ ಸಂದರ್ಭದಲ್ಲಿ ಆರೋಪಿಯನ್ನು ಗಲ್ಲಿಗೇರಿಸಿ ಎಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಡಿವೈಎಸ್ಪಿ ದಿನಕರ ನೇತೃತ್ವದಲ್ಲಿ ಮಹಜರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬೆಳಗಿನಿಂದ ಕಾಯುತ್ತಿದ್ದ ಆಕ್ರೋಶಿತ ಗುಂಪು ಆರೋಪಿಯ ಮೇಲೆ ದಾಳಿಗೆ ಯತ್ನ ನಡೆಸಿದಾಗ ಲಘು ಲಾಠಿ ಚಾರ್ಜ್ ನಡೆಸಿ ಗುಂಪು ಚದುರಿಸಿದ್ದಾರೆ. ಸದ್ಯ ರಸ್ತೆ ನಡೆಸಿದ ಉದ್ರಿಕ್ತರ ಗುಂಪು ಈಗ ರಸ್ತೆ ತಡೆ ನಡೆಸಿ ಸ್ಥಳಕ್ಕೆ ಎಸ್‌ಪಿ ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ.
ಉಡುಪಿ ಎಸ್‌ಪಿ ಡಾ.ಅರುಣ್ ಕುಮಾರ್ ಸ್ಪಷ್ಟನೆ: ಮಲ್ಪೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 124/2023 ಕಲಂ:307, 302, 449, 324 ಐಪಿಸಿ ಪ್ರಕರಣದಲ್ಲಿ ಸಂಜೆ 4:45 ಗಂಟೆಗೆ ಘಟನೆ ನಡೆದ ಸ್ಥಳದಲ್ಲಿ ಆರೋಪಿ ತೋರಿಸಿಕೊಟ್ಟ ಸ್ಥಳ ಮಹಜರು ಮಾಡಲು ಆರೋಪಿಯನ್ನು ಕರೆದುಕೊಂಡ ಬಂದ ಸಮಯದಲ್ಲಿ, ಮೃತರ ಸಂಬಂಧಿಗಳು ಹಾಗೂ ಸ್ನೇಹಿತರು ಆರೋಪಿಯ ವಿರುದ್ದ ಫೋಷಣೆ ಕೂಗಿ ಮಹಜರು ಮುಗಿಸಿ ವಾಪಾಸು ಹೊರಡುವ ಸಮಯದಲ್ಲಿ ವಾಹನವನ್ನು ತಡೆದು ನಿಲ್ಲಿಸುವ ಪ್ರಯತ್ನ ಮಾಡಿದ್ದು, ಈ ಸಮಯ ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿ ಆರೋಪಿಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಪ್ರಸ್ತುತ ಪರಿಸ್ಥಿತಿ ಶಾಂತವಾಗಿರುತ್ತದೆ. ಈ ಬಗ್ಗೆ ಆ ಸಮುದಾಯದ ಹಿರಿಯರೊಂದಿಗೆ ಚರ್ಚಿಸಿ ಶಾಂತಿ ಕಾಪಾಡುವಂತೆ ಮನವಿ ಮಾಡಲಾಯಿತು.