ನಾಲ್ವರ ಹತ್ಯೆ ಪ್ರಕರಣ: ಸ್ಥಳ ಮಹಜರು ವೇಳೆ ಸ್ಥಳೀಯರಿಂದ ಆಕ್ರೋಶ – ಲಾಠಿ ಚಾರ್ಜ್

ಉಡುಪಿ: ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಇಂದು ಸಂಜೆ ಕರೆದುಕೊಂಡು ಬಂದಾಗ ನೇಜಾರಿನ ತೃಪ್ತಿನಗರದಲ್ಲಿ ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಪೊಲೀಸರು ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕೃತ್ಯ ನಡೆದ ಸ್ಥಳಕ್ಕೆ ಕರೆತರುತ್ತಿದ್ದಂತೆ ಸ್ಥಳೀಯರು ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಬಳಿಕ ಮಹಜರು ಮುಗಿಸಿ ಹಿಂದಕ್ಕೆ ಕರೆದುಕೊಂಡು ಹೋಗುವಾಗ ಉದ್ರಿಕ್ತ ಗುಂಪು ಬ್ಯಾರಿಕೇಡ್ ತಳ್ಳಿ ಆರೋಪಿಗೆ ಹಲ್ಲೆ ನಡೆಸಲು ಮುಂದಾಯಿತು. ಇವರನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್‌ಲೈನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ 39 ವರ್ಷದ ಕ್ಯಾಬಿನ್ ಸಿಬ್ಬಂದಿ ಪ್ರವೀಣ್ ಅರುಣ್ ಚೌಗಲೆ (39) ಎಂಬಾತನನ್ನು ಪೊಲೀಸರು  ಬಂಧಿಸಿದ್ದಾರೆ. ಆರೋಪಿಯನ್ನು ಇಂದು ಕೊಲೆ ನಡೆದ ಮನೆಗೆ ಕರೆದೊಯ್ದದ್ದಾಗ ಜಮಾಯಿಸಿದ ಸ್ಥಳೀಯರು ಆತನನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದರು. ಆತನಿಗಾಗಿ ಬೆಳಗ್ಗೆಯಿಂದಲೇ ಸ್ಥಳೀಯರು ಕಾದು ಕುಳಿತಿದ್ದರು.

ಸಂಜೆ 4.45ರ ಸುಮಾರಿಗೆ ಮಹಜರು ಮುಗಿಸಿ ಆರೋಪಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ ಸಾರ್ವಜನಿಕರು ಆರೋಪಿ ವಿರುದ್ಧ ಘೋಷಣೆ ಕೂಗುವ ಮೂಲಕ ವಾಹನ ತಡೆಯಲು ಯತ್ನಿಸಿದರು ಎಂದು ಉಡುಪಿ ಎಸ್ಪಿ ಅರುಣ್ ಕೆ ತಿಳಿಸಿದ್ದಾರೆ. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಆರೋಪಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ತ್ವರಿತ ಕ್ರಮ ಕೈಗೊಳ್ಳಲಾಯಿತು. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದ್ದು, ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಅಧಿಕಾರಿಗಳು ಸ್ಥಳೀಯ ಸಮುದಾಯದ ಹಿರಿಯರೊಂದಿಗೆ ಚರ್ಚೆ ನಡೆಸಿದರು. 
 
ಇದೇ ವೇಳೆ ಆರೋಪಿಯನ್ನು ಬಂಧಿಸುವಲ್ಲಿ ಕ್ಷಿಪ್ರ ಕ್ರಮ ಕೈಗೊಂಡ ಪೊಲೀಸರಿಗೆ ಕುಟುಂಬಸ್ಥರು ಧನ್ಯವಾದ ಅರ್ಪಿಸಿದ್ದಾರೆ. ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ಕೈಗೆತ್ತಿಕೊಂಡು ಆರೋಪಿಗಳಿಗೆ ಒಂದು ವರ್ಷದೊಳಗೆ ಮರಣದಂಡನೆ ವಿಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಅಮಾನುಷ ಹತ್ಯೆಯ ನಂತರ ಆ ಪ್ರದೇಶದ ಹಲವು ಹಿಂದೂ ಕುಟುಂಬಗಳು ದೀಪಾವಳಿ ಆಚರಿಸಲಿಲ್ಲ. ಬಂಧಿತ ವ್ಯಕ್ತಿ ತನಿಖೆಗೆ ಸಹಕರಿಸುತ್ತಿದ್ದು, ತನಿಖೆ ಮುಂದುವರಿದಂತೆ ಕೊಲೆಯ ಹಿಂದಿನ ನಿಖರ ಉದ್ದೇಶ ತಿಳಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಪೊಲೀಸರ ನಿರ್ಲಕ್ಷ್ಯ…. ಆರೋಪಿ ಪ್ರವೀಣ್ ಚೌಗಲೆಯನ್ನು ಬುಧವಾರ ನ್ಯಾಯಾಲಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಆತನ‌ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸಿದ್ದರು. ಆತನಿಗೆ ಹೊಡೆಯಿರಿ ಎಂದು ಹೇಳಿದ್ದರು. ಇಂದು ಸ್ಥಳ ಮಹಜರಿಗೆ ನೇಜಾರಿನ ಮನೆಗೆ ಆರೋಪಿಯನ್ನು ಬೆಳಿಗ್ಗೆ ಕರೆದುಕೊಂಡು ಬರುತ್ತಾರೆ ಎಂಬ ಮಾಹಿತಿ ಸ್ಥಳೀಯರಿಗೆ ತಿಳಿದ್ದು, ಮೊದಲೇ ಐವತ್ತಕ್ಕೂ ಹೆಚ್ಚು ಜನ ಸೇರಿದ್ದರು. ಸಂಜೆ ಆತನನ್ನು ಮನೆಗೆ ಕರೆದುಕೊಂಡು ಬರುತ್ತಿದ್ದಂತೆ ಮಾಹಿತಿ ತಿಳಿದು ನೂರಾರು ಜನ ಕೃತ್ಯ ನಡೆದ ಮನೆಗೆ ಆಗಮಿಸಿದ್ದರು. ಮನೆಯ ಆವರಣದೊಳಗೆ ಅನಗತ್ಯವಾಗಿ ಸ್ಥಳೀಯರನ್ನು ಬಿಟ್ಟಿರುವುದು ಪೊಲೀಸರ ವೈಫಲ್ಯವೇ ಎನ್ನಬಹುದು.

ನಾಲ್ವರನ್ನು ಕೊಂದ ಪಾಪಿಯನ್ನು ಎರಡು ನಿಮಿಷ ನಮಗೆ ಕೊಡಿ ನಾವು ಬುದ್ದಿ ಕಲಿಸುತ್ತೇವೆ ಎಂದು ಆಕ್ರೋಶ ಮಾತು ಒಂದೆಡೆಯಾದರೇ, ಇನ್ನೊಂದೆಡೆ ಆತನನ್ನು ತಕ್ಷಣ ಗಲ್ಲಿಗೆ ಏರಿಸಿ ಎಂದು ಘೋಷಣೆ ಕೂಗತೊಡಗಿದರು. ಆಕ್ರೋಶಿತರ ಸಹನೆಯ ಕಟ್ಟೆ ಒಡೆಯುತ್ತಿದ್ದಂತೆ ಬ್ಯಾರಿಕೇಡ್ ನುಗ್ಗಿ ಹಂತಕನನ್ನು ಹಿಂದಕ್ಕೆ ಕರೆದುಕೊಂಡು ಹೋಗುವಾಗ ಪೊಲೀಸ್ ವಾಹನದತ್ತ ಬರಲು ಯತ್ನಿಸಿದರು. ಪರಿಸ್ಥಿತಿ ಅರಿತ ಡಿವೈಎಸ್‌ಪಿ ದಿನಕರ್ ಕೆ.ಪಿ ಅವರು ಉದ್ರಿಕ್ತರ ಮೇಲೆ ಲಾಠಿ ಬೀಸಲು ಪ್ರಾರಂಭಿಸಿದರು. ಇದರಿಂದ ಪೊಲೀಸರು ಸಹಿತ ಕೆಲವರು ಗಾಯಗೊಂಡರು.

ಸಂಜೆ 4.45ರ ಸುಮಾರಿಗೆ ಮಹಜರು ಮುಗಿಸಿ ಆರೋಪಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ ಸಾರ್ವಜನಿಕರು ಆರೋಪಿ ವಿರುದ್ಧ  ಘೋಷಣೆ  ಕೂಗುವ ಮೂಲಕ ವಾಹನ ತಡೆಯಲು ಯತ್ನಿಸಿದರು ಎಂದು ಉಡುಪಿ ಎಸ್ಪಿ ಅರುಣ್ ಕೆ ತಿಳಿಸಿದ್ದಾರೆ. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಆರೋಪಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ತ್ವರಿತ ಕ್ರಮ ಕೈಗೊಳ್ಳಲಾಯಿತು. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದ್ದು, ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಅಧಿಕಾರಿಗಳು ಸ್ಥಳೀಯ ಸಮುದಾಯದ ಹಿರಿಯರೊಂದಿಗೆ ಚರ್ಚೆ ನಡೆಸಿದರು. 
 
ಇದೇ ವೇಳೆ ಆರೋಪಿಯನ್ನು ಬಂಧಿಸುವಲ್ಲಿ ಕ್ಷಿಪ್ರ ಕ್ರಮ ಕೈಗೊಂಡ ಪೊಲೀಸರಿಗೆ ಕುಟುಂಬಸ್ಥರು ಧನ್ಯವಾದ ಅರ್ಪಿಸಿದ್ದಾರೆ. ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ಕೈಗೆತ್ತಿಕೊಂಡು ಆರೋಪಿಗಳಿಗೆ ಒಂದು ವರ್ಷದೊಳಗೆ ಮರಣದಂಡನೆ ವಿಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಅಮಾನುಷ ಹತ್ಯೆಯ ನಂತರ ಆ ಪ್ರದೇಶದ ಹಲವು ಹಿಂದೂ ಕುಟುಂಬಗಳು ದೀಪಾವಳಿ ಆಚರಿಸಲಿಲ್ಲ. ಬಂಧಿತ ವ್ಯಕ್ತಿ ತನಿಖೆಗೆ ಸಹಕರಿಸುತ್ತಿದ್ದು, ತನಿಖೆ ಮುಂದುವರಿದಂತೆ ಕೊಲೆಯ ಹಿಂದಿನ ನಿಖರ ಉದ್ದೇಶ ತಿಳಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!