ಮಂಗಳೂರು: ಹಿರಿಯ ವೈದ್ಯ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನ
ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು(61) ಅವರು ಇಂದು ನಿಧನರಾಗಿದ್ದಾರೆ.
ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು ಆ ಬಳಿಕ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎನ್ನಲಾಗಿದೆ.