ಉಡುಪಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿ ರಚನೆ
ಉಡುಪಿ: ವಿಧಾನಸಭಾ ಸದಸ್ಯರಾದ ಶಾಸಕ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಾಲ್ಕು ಜನ ಅಧಿಕಾರಿಗಳು ಹಾಗೂ ನಾಲ್ಕು ಜನ ಅಧಿಕಾರೇತರ ಸದಸ್ಯರನ್ನೊಳಗೊಂಡ ಆರಾಧನಾ ಸಮಿತಿಯನ್ನು ರಚಿಸಿ ಸರ್ಕಾರ ಆದೇಶಿಸಿದೆ.
ಅಧಿಕಾರಿಗಳಾದ ಉಡುಪಿ ತಹಸೀಲ್ದಾರ್ ಸದಸ್ಯ ಕಾರ್ಯದರ್ಶಿ, ಕಾರ್ಯನಿರ್ವಾಹಕ ಅಭಿಯಂತರರು ತಾಲೂಕು ಪಂಚಾಯತ್ ಉಡುಪಿ, ತಾಲೂಕು ಕಾರ್ಯನಿರ್ವಾಹಕ ಅಭಿಯಂತರರು ಜಿಲ್ಲಾ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಉಡುಪಿ ಇವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಅಧಿಕಾರೇತರರ ಕೋಟಾಡಡಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಸುನೀತಾ ಪೈ, ಜೀವನ್ ಕುಮಾರ್, ಚಂದ್ರಶೇಖರ ನಾಯ್ಕ ಚಾಂತಾರು ಇವರನ್ನು ಸದಸ್ಯರನ್ನಾಗಿ ನೇಮಿಸಿ ಆದೇಶಿಸಲಾಗಿದೆ.