ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ- HSRP ಪಡೆಯುವುದು ಹೇಗೆ….? ಇಲ್ಲಿದೆ ಮಾಹಿತಿ
ಬೆಂಗಳೂರು: ಹಳೆಯ ವಾಹನಗಳಿಗೆ ಭದ್ರತಾ ನೊಂದಣಿ ಫಲಕಗಳನ್ನು ಅಳವಡಿಸಲು ಈಗಾಗಲೇ ನೀಡಲಾದ ಅವಧಿಯನ್ನು ಸಾರಿಗೆ ಇಲಾಖೆ ಮೂರು ತಿಂಗಳುಗಳ ಕಾಲ ವಿಸ್ತರಿಸಿದೆ.
ದೀಪಾವಳಿ ಸಂದರ್ಭದಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡುವುದಾಗಿ ಹೇಳಿದ್ದರು. ಇದೀಗ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ. 2024ರ ಫೆಬ್ರವರಿ 17ರವರೆಗೆ ಅವಧಿಯನ್ನು ವಿಸ್ತರಣೆ ಮಾಡಿದೆ.
ಸಾರಿಗೆ ಇಲಾಖೆ ಹೊರಡಿಸಿರುವ ಆದೇಶ ಇಂತಿದೆ…
ಕರ್ನಾಟಕ ರಾಜ್ಯದಲ್ಲಿ ದಿನಾಂಕ: 01-04-2019ಕ್ಕಿಂತ ಮೊದಲು ನೋಂದಾಯಿಸಲಾದ ಹಳೆಯ ವಾಹನ ಗಳಿಗೆ ನವೆಂಬರ್ 17, 2023 ರೊಳಗಾಗಿ ಹೆಚ್‌ಎಸ್ಆರ್ಪಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಅಧಿಸೂಚನೆ ಸಂಖ್ಯೆ, ಟಿಡಿ 193 ಟಿಡಿಒ 2021, ದಿನಾಂಕ:17-8-2023 ರಂದು ಆದೇಶ ಹೊರಡಿಸಿತ್ತು. ಇದೀಗ ಸರ್ಕಾರದ ಅಧಿಸೂಚನೆ ಸಂಖ್ಯೆ, ಟಿಡಿ 193 ಟಿಡಿಒ 2021 ನವೆಂಬರ್ 16, 2023ರಂದು, ನವೆಂಬರ್ 17, 2023ರವರೆಗೆ ನೀಡಲಾಗಿದ್ದ ಕಾಲಾವಕಾಶ ವನ್ನು ಫೆಬ್ರವರಿ 17 2024ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿ ರುತ್ತದೆ ಎಂದು ಹೇಳಿದೆ.
ಏಪ್ರಿಲ್ 1, 2019ಕ್ಕಿಂತ ಮೊದಲು ನೋಂದಾಯಿಸ ಲಾದ ಹಳೆಯ ವಾಹನಗಳ ಮಾಲೀಕರು ಫೆಬ್ರವರಿ 17, 2024ರೊಳಗಾಗಿ ತಮ್ಮ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆ ಮಾಡಿಕೊಳ್ಳುವಂತೆ ಈ ಮೂಲಕ ಸಾರ್ವಜನಿಕರ ಮಾಹಿತಿಗಾಗಿ ತಿಳಿಸಲಾಗಿದೆ.
ನಿಗದಿತ ದಿನಾಂಕದೊಳಗೆ ಹೆಚ್.ಎಸ್.ಆರ್.ಪಿ. ಯನ್ನು ಅಳವಡಿಸದಿದ್ದಲ್ಲಿ ಸರ್ಕಾರಿ ಅಧಿಸೂಚನೆ ಸಂಖ್ಯೆ: ಟಿಡಿ 250 ಟಿಡಿಒ 2019, ಬೆಂಗಳೂರು ಪ್ರಕಾರ ಹಾಗೂ ಕಾಲ ಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳನ್ವಯ ದಂಡವನ್ನು ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಮಾತನಾಡಿ, ರಾಜ್ಯದ ಒಟ್ಟಾರೆ ಜನಸಂಖ್ಯೆಯ ಪೈಕಿ ಕೇವಲ ಶೇ.3ರಷ್ಟು ಜನರು ಮಾತ್ರ ನಂಬರ್ ಪ್ಲೇಟ್ ಬದಲಾಯಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರ ನಮ್ಮ ಮೇಲೆ ಒತ್ತಡ ಹೇರುತ್ತಿದೆ. ಹೀಗಾಗಿ ನಂಬರ್ ಪ್ಲೇಟ್ ಬದಲಿಸುವಂತೆ ನಾವೂ ಜನರ ಮೇಲೆ ಒತ್ತಡ ಹೇರಬೇಕಾಗಿದೆ. ರಾಜ್ಯವನ್ನು ಹೊರತುಪಡಿಸಿ ದೇಶದಾದ್ಯಂತ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಭಾರತೀಯ ನೋಂದಣಿ ಪ್ಲೇಟ್ ತಯಾರಕರ ಸಂಘದ ಕಾರ್ಯಕಾರಿ ಸದಸ್ಯ ಮತ್ತು ವಕ್ತಾರ ಸುಧೀರ್ ಗೋಯಲ್ ಅವರು ಮಾತನಾಡಿ, ರಾಜ್ಯದ 2 ಕೋಟಿಗೂ ಹೆಚ್ಚು ವಾಹನ ಮಾಲೀಕರ ಪೈಕಿ ಕೇವಲ 2.5 ಲಕ್ಷ ಜನರು ತಮ್ಮ ನಂಬರ್ ಪ್ಲೇಟ್ ಬದಲಾಯಿ ಸಿದ್ದಾರೆ, ರಾಜ್ಯ ಸರ್ಕಾರ ಮತ್ತು ಸಾರಿಗೆಯ ಜಾಗೃತಿ ಕೊರತೆ ಇದಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಒಡಿಶಾದ ಉದಾಹರಣೆ ನೀಡಿದ ಅವರು, ಅಲ್ಲಿ ಪರಿಣಾಮಕಾರಿ ಜಾಗೃತಿ ಅಭಿಯಾನದಿಂದಾಗಿ ಆರು ತಿಂಗಳಲ್ಲಿ 58 ಲಕ್ಷ ಜನರು ತಮ್ಮ ನಂಬರ್ ಪ್ಲೇಟ್‌ಗಳನ್ನು ಬದಲಾಯಿಸಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದಾರೆ. ಇದೀಗ ನಮ್ಮ ರಾಜ್ಯದ ಅಧಿಕಾರಿಗಳು ಕೂಡ ಜಾಗೃತಿ ಮೂಡಿಸುವ ವಿಶ್ವಾಸವಿದ್ದು, ನೋಂದಣಿ ಸಂಖ್ಯೆ ಶೀಘ್ರದಲ್ಲೇ ಹೆಚ್ಚಾಗುವ ನಿರೀಕ್ಷೆಗಳಿವೆ ಎಂದು ತಿಳಿಸಿದರು.
ಎಚ್‌ಎಸ್‌ಆರ್‌ಪಿ ಪಡೆಯುವುದು ಹೇಗೆ….?
ಕರ್ನಾಟಕ ಸಾರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ www.siam.in ಭೇಟಿ ನೀಡಿ ಮತ್ತು ‘Book HSRP’ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು. ನಂಬರ್ ಪ್ಲೇಟ್ ಪಡೆಯುವ ವಾಹನ ತಯಾರಕರನ್ನು ಆಯ್ಕೆಮಾಡಿ ಮತ್ತು ನಿಮ್ಮ ವಾಹನದ ವಿವರವನ್ನು ಭರ್ತಿ ಮಾಡಬೇಕು.
ಎಚ್‌ಎಸ್‌ಆರ್‌ಪಿ ಜೋಡಣೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ ಮತ್ತು ಆನ್‌ಲೈನ್‌ನಲ್ಲಿ ಎಚ್‌ಎಸ್‌ಆರ್‌ಪಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. (ಆನ್‌ಲೈನ್ ಮೂಲಕ ಮಾತ್ರ ಶುಲ್ಕ ಪಾವತಿ ಮಾಡಬೇಕು). ವಾಹನ ಮಾಲೀಕರ ಮೊಬೈಲ್‌ಗೆ ಒಟಿಪಿ ಸಂಖ್ಯೆ ಬರುತ್ತದೆ. ಮಾಲೀಕರು ಅವರ ಅನುಕೂಲಕ್ಕೆ ಮತ್ತು ವೆಬ್‌ಸೈಟ್‌ಗೆ ಅನುಗುಣವಾಗಿ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಬಹುದು. ಮಾಲೀಕರು ನಂತರ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್ ಪಿ ಅಳವಡಿಸಲು ವಾಹನ ತಯಾರಕರು ಅಥವಾ ಡೀಲರ್ ಬಳಿ ಭೇಟಿ ನೀಡಬೇಕು.
Honda City car