ತಾಯಿ, ಮಕ್ಕಳ ಕೊಲೆ ಪ್ರಕರಣದ ಆರೋಪಿಯನ್ನು ಕೆಲಸದಿಂದ ಅಮಾನತುಗೊಳಿಸಿದ ಏರ್ ಇಂಡಿಯಾ

ಮಂಗಳೂರು, ನ. 18: ನೇಜಾರಿನ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕೆಲಸದಿಂದ ಅಮಾನತುಗೊಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನ ವಕ್ತಾರರು ‘ಘಟನೆಯಿಂದ ನಮಗೆ ತೀವ್ರ ದು:ಖವಾಗಿದೆ. ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡುತ್ತೇವೆ ಮತ್ತು ತನಿಖೆಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇವೆ. ಈ ಪ್ರಕರಣದ ಹಿನ್ನೆಲೆಯಲ್ಲಿ ನಾವು ಆರೋಪಿಯನ್ನು ತಕ್ಷಣದಿಂದ ಜಾರಿಯಾಗುವಂತೆ ಕೆಲಸದಿಂದ ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!