ಸಹಕಾರ ಸಂಘಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ತನ್ನಿ- ಉಡುಪಿ ಪೌರಾಯುಕ್ತ ರಾಯಪ್ಪ

ಉಡುಪಿ, ನ.18: ಸಹಕಾರ ರಂಗದಲ್ಲಿ ಐಕ್ಯತೆ ,ಬದ್ಧತೆ , ನಿಷ್ಠೆ ಯಿಂದ ಸೇವೆ ನೀಡಿದರೆ ಯಶಸ್ಸು ಸಾಧ್ಯವಾಗುತ್ತದೆ. ಸಹಕಾರ ಸಂಘಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಜಾರಿಗೆ ತರುವ ಕಾರ್ಯ ಅಗತ್ಯವಾಗಿ ಮಾಡಬೇಕು ಎಂದು ಉಡುಪಿ ನಗರಸಭೆಯ ಪೌರಾಯುಕ್ತ ರಾಯಪ್ಪ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಕಿನ್ನಿಮೂಲ್ಕಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ 70 ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಶುಕ್ರವಾರ ಬಡಗುಬೆಟ್ಟು ಸೊಸೈಟಿಯ ಜಗನ್ನಾಥ್ ಸಭಾ ಭವನದಲ್ಲಿ ಜರಗಿದ ನಾಲ್ಕನೆ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಯುವ ಜನಾಂಗ ಸೆಳೆಯಲ್ಲೂ ಡಿಜಿಟಲ್ ಬ್ಯಾಕಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ಸ್ಥಳೀಯರು ತಮ್ಮ ತಮ್ಮ ವ್ಯಹಾರವನ್ನು ಸಹಕಾರಿ ಬ್ಯಾಕಿಂಗ್ ಮಾಡಬೇಕು ಎಂದು ತಿಳಿಸಿದರು.

ಉಡುಪಿ ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಅರುಣ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಸಂಸ್ಥೆಯಲ್ಲಿ ಸರಳ ವ್ಯಪಾರ ಪ್ರಕ್ರಿಯೆ ಕುರಿತು ನಿವೃತ್ತ ಉಪನ್ಯಾಸಕ ಪ್ರೊ.ಸುರೇಂದ್ರನಾಥ ಶೆಟ್ಟಿ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ದ.ಕ.ಸಹಕಾರಿ ಹಾಲು ಒಕ್ಕೊಟದ ನಿರ್ದೇಶೇಕ ರವಿರಾಜ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಅಲೆವೂರು ಹರೀಶ್ ಕಿಣಿ, ಶಂಕರ ಪೂಜಾರಿ ಕಟಪಾಡಿ, ಮನೋಜ್ ಕರ್ಕೇರ, ಮಟ್ಟಾರ್ ಗಣೇಶ ಕಿಣಿ, ಅಶೋಕ್ ಕುಮಾರ್ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.

ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿಯ ಸಿಇಒ ರಾಜೇಶ ಹೆಗ್ಡೆ ಸ್ವಾಗತಿಸಿದರು. ಪ್ರವೀಣ ಕುಮಾರ ಮತ್ತು ರಮೇಶ್ ಕಾರ್ಯಕ್ರಮ ನಿರೂಪಿಸಿ ದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಲಪ್ಪ ಕೋಡಿಹಳ್ಳಿ ವಂದಿಸಿದರು.”

Leave a Reply

Your email address will not be published. Required fields are marked *

error: Content is protected !!