ಉಡುಪಿ: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಅಹವಾಲು ಸ್ವೀಕಾರ

ಉಡುಪಿ, ನ.20: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೋಸ್ ಅವರು ನ. 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯನ್ನು ನಡೆಸಲಿದ್ದು, ಸಾರ್ವಜನಿಕರು ಅಹವಾಲನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ : 0820- 2573596, ಸಹಾಯವಾಣಿ ಸಂಖ್ಯೆ : 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶುಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ. ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!