ಉಡುಪಿ: ಪೂರ್ಣಿಮಾ ಜನಾರ್ದನ್ ರವರಿಗೆ ಒಂದು ಚಿನ್ನ, ಒಂದು ಬೆಳ್ಳಿ ಪದಕ
ಉಡುಪಿ: ಭಾರತೀಯ ಅಂಚೆ ಇಲಾಖೆ, ಉಡುಪಿ ಅಂಚೆ ವಿಭಾಗವು ಉಡುಪಿ ಎಂಜಿಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ಕೃಷ್ಣಾಪೆಕ್ಸ್ – 2023 ರಲ್ಲಿ ಉಡುಪಿ ಅಂಚೆ ವಿಭಾಗದ ಉದ್ಯೋಗಿ ಪೂರ್ಣಿಮಾ ಜನಾರ್ದನ್ ಕೊಡವೂರು ತಮ್ಮ ಸಂಗ್ರಹದ ” ಫಿಲಾಟಲಿಕ್ ಜರ್ನಿ ಆಫ್ ಉಡುಪಿ ತ್ರೂ ಸ್ಪೆಶಲ್ ಕವರ್ಸ್ ” ಪ್ರದರ್ಶನಕ್ಕೆ ಚಿನ್ನದ ಪದಕ ಹಾಗು “ವಿಶೇಷ ರಾಷ್ಟ್ರೀಯ ಹಾಗು ಅಂತರಾಷ್ಟ್ರೀಯ ದಿನಗಳು” ಅಂಚೆ ಚೀಟಿ ಪ್ರದರ್ಶನಕ್ಕೆ ಬೆಳ್ಳಿಯ ಪದಕ ಪಡೆದಿರುತ್ತಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕರ್ನಾಟಕ ವೃತ್ತದ ಪೋಸ್ಟ್ ಮಾಸ್ಟರ್ ಜನರಲ್ ಎಲ್ ಕೆ ದಾಸ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ರಮೇಶ್ ಪ್ರಭು ಹಾಗು ಜ್ಯೂರಿ ಜಗನ್ನಾಥ ಮಣಿ ಮತ್ತು ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.