ಉಡುಪಿ: ರೈತರ ಸಾಲಮನ್ನಾ ಯೋಜನೆಯ ಆಯ್ಕೆ ತರಬೇತಿ ಶಿಬಿರ
ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಲ ಮನ್ನಾ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ರೈತರ ಸಾಲಮನ್ನಾ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾನದಂಡದ ಬಗ್ಗೆ ತರಬೇತಿ ಶಿಬಿರವು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾ ಭವನದಲ್ಲಿ ಜರುಗಿತು.
ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ-ದ.ಕ ಜಿಲ್ಲಾ ಮೀನು ಮಾರಾಟ ಮಹಾಮಂಡಳ ಅಧ್ಯಕ್ಷ ಯಶ್‌ಪಾಲ್ ಸುವರ್ಣ , ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರುಗಳಾದ ಸುಧೀರ್ ಕುಮಾರ್, ಕಟಪಾಡಿ ಶಂಕರ ಪೂಜಾರಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಗಣೇಶ್ ಆರ್, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ.ನಾಯಕ್, ಸಹಕಾರ ಸಂಘಗಳ ಕುಂದಾಪುರ ಉಪವಿಭಾಗದ ಸಹಾಯಾಕ ನಿಬಂಧಕರಾದ ಅರುಣ್ ಕುಮಾರ್(ಪ್ರಭಾರ), ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೆಲ್ವಿಚಾರಕರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ ಎಸ್.ಪಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.