ಬೆಂಗಳೂರು ಕಂಬಳ ಓಟದಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ ‘ಕಾಂತಾರ’ ಕೋಣಗಳು!

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದ ಕಂಬಳದ ಓಟದಲ್ಲಿ ಪಾಲ್ಗೊಂಡ ಕೋಣಗಳು ಚಿನ್ನದ ಪದಕ ಗೆದ್ದಿವೆ.

ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು ಇಂದು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪದಕ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟವನ್ನು ಅಲ್ಲಿ ನೆರೆದಿದ್ದವರು ಆಶ್ಚರ್ಯಚಕಿತರಾಗಿ ಕಣ್ತುಂಬಿಕೊಂಡರು.

ಅರಮನೆ ಮೈದಾನದಲ್ಲಿ ನಿರ್ಮಿಸಿರುವ ರಾಜ-ಮಹಾರಾಜ ಕೆರೆಯಲ್ಲಿ ಬೆಂಗಳೂರು ಕಂಬಳದ ಮೊದಲ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಅಪ್ಪು, ಕಿಟ್ಟು ಜೋಡಿ ಕೋಣಗಳು ಇತಿಹಾಸ ಬರೆದಿವೆ.

ಏಳು ಬಲಿಷ್ಠ ಕೋಣಗಳ ಹಿಂದಿಕ್ಕಿದ ಕಾಂತಾರ ಜೋಡಿ ಕೋಣವು ಒಂದು ಲಕ್ಷ ನಗದು ಹಾಗೂ 16 ಗ್ರಾಂ ಚಿನ್ನಕ್ಕೆ ಮುತ್ತಿಕ್ಕಿದೆ.

Leave a Reply

Your email address will not be published. Required fields are marked *

error: Content is protected !!